ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಈಗಾಗಲೇ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಲಾಗಿತ್ತು. ಈಗ ಮತ್ತೆ ಹೈಕೋರ್ಟ್ ಖುದ್ದು ಹಾಜರಾತಿಯಿಂದ ಬಿಎಸ್ ವೈಗೆ ವಿನಾಯ್ತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಈ ಕುರಿತಂತೆ ಇಂದು ಶುಕ್ರವಾರ ಹೈಕೋರ್ಟ್ ನ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆಯನ್ನು ಜುಲೈ.೨೬ಕ್ಕೆ ನಿಗದಿ ಪಡಿಸಿದೆ. ಈ ಹಿನ್ನಲೆಯಲ್ಲಿ ಜುಲೈ.೨೫ರವರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿ ಮಧ್ಯಂತರ ಆದೇಶವನ್ನು ನೀಡಿದೆ.
ಇನ್ನೂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯ್ತಿ ಕೋರಲು ಅವಕಾಶ ಮಾಡಿಕೊಟ್ಟಿದೆ. ಜುಲೈ.೨೫ರವರೆಗೆ ಬಿಎಸ್ ಯಡಿಯೂರಪ್ಪಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದೆ. ಅಂದಹಾಗೇ ಜುಲೈ.೧೫ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿತ್ತು. ಈ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಖುದ್ದು ವಿಚಾರಣೆಯ ಹಾಜರಾತಿಗೆ ವಿನಾಯ್ತಿ ನೀಡಿ ಆದೇಶಿಸಿತ್ತು. ಈಗ ಮತ್ತೆ ಇದನ್ನು ವಿಸ್ತರಣೆ ಮಾಡಿ ಆದೇಶಿಸಿದೆ.