Saturday, April 19, 2025
Google search engine

Homeರಾಜ್ಯಒಂದನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ ೮ ವರ್ಷ

ಒಂದನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ ೮ ವರ್ಷ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದ್ದು, ಈ ನಿಯಮ ೨೦೨೫-೨೬ನೇ ಸಾಲಿನಿಂದ ಅನ್ವಯವಾಗಲಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ೬ ವರ್ಷಗಳಿಗೆ ಕಡ್ಡಾಯಗೊಳಿಸಿರುವ ಕಾರಣ ಗರಿಷ್ಠ ವಯೋಮಿತಿಯಲ್ಲೂ ಹೆಚ್ಚಳ ಮಾಡಲಾಗಿದೆ.

ಎಲ್‌ಕೆಜಿ ಮತ್ತು ಯುಕೆಜಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿ ಈಗಾಗಲೇ ಕ್ರಮವಾಗಿ ನಾಲ್ಕು ಹಾಗೂ ಐದು ವರ್ಷಕ್ಕೆ ನಿಗದಿ ಮಾಡಲಾಗಿತ್ತು. ಹಾಗೆಯೇ, ಗರಿಷ್ಠ ವಯೋಮಿತಿಯನ್ನು ಆರು ಹಾಗೂ ಏಳು ವರ್ಷಕ್ಕೆ ಹೆಚ್ಚಿಸಲಾಗಿದೆ. `ಕಡ್ಡಾಯ ಶಿಕ್ಷಣ ಕಾಯ್ದೆಗೆ ಅನುಗುಣವಾಗಿ ಮಕ್ಕಳ ದಾಖಲಾತಿಯ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯನ್ನು ಹೆಚ್ಚಳ ಮಾಡಿರುವುದರಿಂದ ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಗಣನೀಯವಾಗಿ ತಗ್ಗಿಸಲು ಸಹಾಯವಾಗಲಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

RELATED ARTICLES
- Advertisment -
Google search engine

Most Popular