ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರರನ್ನು ನಿನ್ನೆ ಇಡಿ ವಶಕ್ಕೆ ಪಡೆದು ಸತತ ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ನಿನ್ನೆ ತಡರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದ್ದು, ಇಂದು ಶನಿವಾರ ಬೆಳಗ್ಗೆ ಯಲಹಂಕದಲ್ಲಿರುವ ಜಡ್ಜ್ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ನಾಗೇಂದ್ರರನ್ನ ಜುಲೈ ೧೮ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.
ವಾಲ್ಮೀಕಿ ನಗಮದ ೯೪ ಕೋಟಿಗೂ ಅಧಿಕ ಹಣದ ಅವ್ಯವಹಾರದ ಬಗ್ಗೆ ನಾಗೇಂದ್ರರನ್ನ ಸತತ ೧೦ ಗಂಟೆಗಳ ಕಾಲ ವಿಚಾರಣೆ ನಡೆಸಿ ಪ್ರಶ್ನೆಗಳ ಸುರಿಮಳೆಯನ್ನು ಕೇಳಿದ್ದಾರೆ ಎನ್ನಲಾಗಿದೆ. ಅಕ್ರಮದಲ್ಲಿ ನಾಗೇಂದ್ರ ಕೈವಾಡವಿದೆ ಎನ್ನಲಾಗಿದ್ದು, ಇದಕ್ಕೆ ಇ.ಡಿ ಅಧಿಕಾರಿಗಳಿಗೆ ನಾಗೇಂದ್ರರನ್ನ ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಾಗೇಂದ್ರ, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.