ಮಂಡ್ಯ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಪಾಂಡವಪುರದ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಾಂಡವಪುರದಲ್ಲಿ ನಿರ್ಮಾಣವಾಗಿರುವ ಬೃಹತ್ ವೇದಿಕೆ ಪರಿಶೀಲನೆ ನಡೆಸಿ ಮಾತನಾಡಿದ ಮಾಜಿ ಸಚಿವ ಸಿ ಎಸ್ ಪುಟ್ಟರಾಜು, ಕಾರ್ಯಕ್ರಮಕ್ಕೆ ಎರಡು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಮನವಿ ಮಾಡಿದ್ದಾರೆ.
ನಮ್ಮ ಈ ಕಾರ್ಯಕ್ರಮಕ್ಕೆ ಕೆಲವರು ಮದ್ಯ ಹಂಚಿಕೆ ಮಾಡಿ ಗೊಂದಲ ಮಾಡಿಸಲು ಸಂಚು ರೂಪಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ಎರಡು ಪಕ್ಷದ ನಾಯಕರು ಮತ್ತು ಮುಖಂಡರು ಭಾಗವಹಿಸುವ ನಿರೀಕ್ಷೆ ಇದೆ. ನಾಳೆ ಸುಮಾರು 50 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.
ಕಾರ್ಯಕ್ರಮದಲ್ಲಿ ಸಸ್ಯಹಾರಿ ಮತ್ತು ಮಾಂಸಹಾರಿ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕೇಂದ್ರ ಸಚಿವರಾದ ಎಚ್ ಡಿಕೆ ತಾಲೂಕುವಾರು ಅಭಿನಂಧನಾ ಸಭೆ ನಡೆಸಿ ಕೃತಜ್ಞತೆ ಸಲ್ಲಿಸಲಿದ್ದಾರೆ.