Monday, April 21, 2025
Google search engine

Homeರಾಜ್ಯ140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ

140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ ೧೪೦ ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶನಿವಾರ ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಸೊರಬ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ ೬೨ ಕೋಟಿ ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು.

ಸೊರಬ ತಾಲೂಕಿನಲ್ಲಿ ಕೊರತೆ ಇರುವ ಶಿಕ್ಷಕರ ಶೇಕಡ ೯೫ ರಷ್ಟು ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗುತ್ತಿದೆ ಎಂದ ಅವರು ಶಾಲಾ ಮಕ್ಕಳಿಗೆ ವಾರದ ಎರಡು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರ ೧೫೦೦ ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಕವನ್ನು ಭರಿಸಲಿದೆ ಎಂದರು.

ಅಲ್ಲದೆ ಶಾಲಾ ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌಷ್ಟಿಕಾಂಶ ಯುಕ್ತ ಆಹಾರ ಸರಬರಾಜು ಮಾಡಲು ಉದ್ದೇಶಿಸಿದ್ದು ಪ್ರತಿ ದಿನ ಬೆಳಿಗ್ಗೆ ೫೫ ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದರು.

ಸೊರಬ ಶಿರಾಳಕೊಪ್ಪ ಮತ್ತು ಆನವಟ್ಟಿ ಸುತ್ತಮುತ್ತಲ ಪ್ರದೇಶಗಳ ೩೫೪ ಗ್ರಾಮಗಳ ನಿವಾಸಿಗಳಿಗೆ ಶರಾವತಿ ನದಿಯಿಂದ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸುಮಾರು ೬೦೦ ಕೋಟಿ ರೂ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳುವ ಆಶಯ ಹೊಂದಿರುವುದಾಗಿ ತಿಳಿಸಿದ ಅವರು ತಾಲೂಕಿನ ಜನರಿಗೆ ಯಾವುದೇ ಅಡಚಣೆಯಾಗದಂತೆ ದಂಡಾವತಿ ನದಿಯ ನೀರನ್ನು ಎರಡು ಕೆನಾಲ್ ಗಳ ಮೂಲಕ ತಾಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ತಾಲೂಕಿನಲ್ಲಿ ವಿವಿಧ ಕೆನಾಲುಗಳ ಮೂಲಕ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಅಲ್ಲದೆ ಚಾನಲ್‌ಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

RELATED ARTICLES
- Advertisment -
Google search engine

Most Popular