ನವದೆಹಲಿ : ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶನಿವಾರ ಏಮ್ಸ್ ನಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ಶನಿವಾರ ತಿಳಿಸಿದ್ದಾರೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಾಧ್ಯಮ ಕೋಶದ ಉಸ್ತುವಾರಿ ಡಾ. ರೀಮಾ ದಾದಾ ಅವರ ಪ್ರಕಾರ, ರಾಜನಾಥ್ ಸಿಂಗ್ ಅವರನ್ನ ಬೆನ್ನುನೋವಿಗೆ ಮೌಲ್ಯಮಾಪನ ಮಾಡಿ ಚಿಕಿತ್ಸೆ ನೀಡಲಾಯಿತು. ಶನಿವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಸಚಿವರನ್ನ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಂದ್ಹಾಗೆ, ರಾಜನಾಥ್ ಸಿಂಗ್ ಅವರನ್ನ ಗುರುವಾರ ಮುಂಜಾನೆ ನರಶಸ್ತ್ರಚಿಕಿತ್ಸಾ ವಿಭಾಗದ ಅಡಿಯಲ್ಲಿ ಆಸ್ಪತ್ರೆಯ ಹಳೆಯ ಖಾಸಗಿ ವಾರ್ಡ್ಗೆ ದಾಖಲಿಸಲಾಗಿತ್ತು.