Saturday, April 19, 2025
Google search engine

Homeರಾಜ್ಯಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ

ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ೨೦, ೨೧, ೨೨ ರಂದು ಜಿಲ್ಲೆಯಲ್ಲಿ ನಡೆಯಲಿದೆ. ಈ ಸಂಬಂಧ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಮತ್ತು ಬೈಪಾಸ್ ಈ ೩ ಸ್ಥಳಗಳ ಆಯ್ಕೆ ಮಾಡಿದೆ. ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳ ಆಚರಣೆಗೆ ಬರುವುದಕ್ಕೆ ಜನರಿಗೆ ಯಾವುದೇ ತರಹ ತೊಂದರೆ ಆಗಬಾರದು ಎಂದು ಡಿಸೆಂಬರ್ ಮಾಹೆಯಲ್ಲಿ ಮಳೆಗಾಲ ಇಲ್ಲದಿರುವಾಗ ಮತ್ತು ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂಬ ಉದ್ದೇಶದಿಂದ ಡಿಸೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular