Saturday, April 19, 2025
Google search engine

Homeರಾಜ್ಯಸುದ್ದಿಜಾಲದೇವೇಗೌಡರ ಕುಟುಂಬವನ್ನು ಮುಳುಗಿಸಲು ಹೊರಟಿದ್ದಾರೆ : ಜಿಟಿ ದೇವೇಗೌಡ ಕಿಡಿ

ದೇವೇಗೌಡರ ಕುಟುಂಬವನ್ನು ಮುಳುಗಿಸಲು ಹೊರಟಿದ್ದಾರೆ : ಜಿಟಿ ದೇವೇಗೌಡ ಕಿಡಿ

ಮಂಡ್ಯ : ಮಂಡ್ಯ ಕ್ಷೇತ್ರದಿಂದ ಲೋಕಸಭೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಹಾಗೂ ಸಚಿವರಾಗಿ ಆಯ್ಕೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಅಭಿನಂದನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಜಿಟಿ ದೇವೇಗೌಡ ರಾಜ್ಯದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಸಹಕಾರ ಬೇಕು ಆದರೆ ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ. ಎಚ್ ಡಿ ದೇವೇಗೌಡರ ಕುಟುಂಬವನ್ನು ಮುಳುಗಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಿದ್ದು, ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಸಾಬೀತು ಮಾಡಿದ್ದೇವೆ. ಸಿಎಂ ಆದಾಗ ಕೊಟ್ಟಿರುವ ಕಾರ್ಯಕ್ರಮ ಜನರ ಮನಸ್ಸಿನಲ್ಲಿ ಇದೆ.ಮಂಡ್ಯದ ಜನ ಕೀರ್ತಿ ತಂದು ಕೊಟ್ಟಿದ್ದಾರೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಕ್ಕೆ ಹೆಚ್ಚು ಮತ ಬಂದಿದೆ ಎಂದರು.

ರಾಜ್ಯದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಸಹಕಾರ ಬೇಕು ಆದರೆ ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ.ಎಚ್ ಡಿ ದೇವೇಗೌಡರ ಕುಟುಂಬವನ್ನು ಮುಳುಗಿಸಲು ಹೊರಟಿದ್ದಾರೆ. ಕಾಂಗ್ರೆಸ್ನವರು ಬಿಜೆಪಿಯನ್ನು ೪೦ ಪರ್ಸೆಂಟ್ ಕಮಿಷನ್ ಸರ್ಕಾರ ಅಂತಿದ್ರು. ಆದರೆ ಇದೀಗ ಕಾಂಗ್ರೆಸ್ ೧೦೦ ಪರ್ಸೆಂಟ್ ಕಮಿಷನ್ ಸರ್ಕಾರ ಆಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶಾಸಕ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular