ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ನಾಳಿನ ನಿರಂತರ ಅಹೋರಾತ್ರಿ ಧರಣಿಯ ಬಗ್ಗೆ ಚರ್ಚಿಸಿದಾಗ ಜಿಲ್ಲಾಧಿಕಾರಿಗಳು ಧರಣಿಯನ್ನು ಕೈ ಬಿಡಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಮಸ್ಯೆಗಳನ್ನು ಚರ್ಚಿಸುವ ಸಲುವಾಗಿ ಸಹಕಾರ ಕೋರಿದರು.
ನಂತರ ಮಾತನಾಡಿದ ರಾಜಾಧ್ಯಕ್ಷರಾದ ಭಾಗ್ಯರಾಜ್ ರವರು, ರೈತರ ಅಹೋರಾತ್ರಿ ಧರಣಿ ನಿರಂತರವಾಗಿ ನಡೆಯುತ್ತದೆ. ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಸಮಸ್ಯೆ ಬಗೆ ಹರಿಸಲು ನಾಳೆಯೇ ಸಭೆ ಮಾಡಿ ಎಂದು ಒತ್ತಾಯಿಸಿದರು.
ಆದುದರಿಂದ ನಾಳಿನ ಚಳವಳಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ರೈತರು ಕಬ್ಬು ಬೆಳೆಗಾರರು ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರೈತರಲ್ಲಿ ಮನವಿ ಮಾಡಿಕೊಳ್ಳುತ್ತೇವೆ.
ಇಂದಿನ ನಿಯೋಗದಲ್ಲಿ ರಾಜ್ಯ ಉಪಾಧ್ಯಕ್ಷರಾದ ಕೆರೆಹುಂಡಿ ರಾಜಣ್ಣ ರಾಜ್ಯ ಪ್ರದಾನ ಕಾರ್ಯದರ್ಶಿ ಮಲೆಯೂರು ಹರ್ಷ ರಾಜ್ಯ ಸಂಘಟನಾ ಕಾರ್ಯದರ್ಶಿ ಅತಹಳ್ಳಿ ಸ್ವಾಮಿರಾಜ್, ಮೈಸೂರು ಜಿಲ್ಲಾಧ್ಯಕ್ಷರಾದ ಹಾಡ್ಯ ರವಿ, ಜಿಲ್ಲಾ ಹಿರಿಯ ಉಪಾಧ್ಯಕ್ಷರು ಬನ್ನೂರು ಕೃಷ್ಣಪ್ಪ ಜಿಲ್ಲಾ ಪ್ರದಾನ ಕಾರ್ಯದರ್ಶಿ ಕಸವಿನಹಳ್ಳಿ ಮಂಜೇಶ್ ತಾಲ್ಲೂಕು ಅಧ್ಯಕ್ಷ ಅಂಬಳೆ ಮಹದೇವಸ್ವಾಮಿ ಹಾಜರಿದ್ದರು.