ಮಂಡ್ಯ: ಮೈಶುಗರ್ ಬಾರಿ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ.
ಸುಮಾರು 52 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಮೈಶುಗರ್ ಸಕ್ಕರೆ ಕಾರ್ಖಾನೆ ವಿದ್ಯುತ್ ಬಿಲ್ ಮನ್ನಾ ಆಗಿಲಿದೆಯೇ ಎಂಬ ಪ್ರಶ್ನೆ ಮೂಡಿದೆ.
ಕಾರ್ಖಾನೆ ಹಲವು ವರ್ಷಗಳಿಂದ 52.25 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ,

ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಇದಗಿದ್ದು, 25 ವರ್ಷಗಳಿಂದ ಉಳಿಸಿಕೊಂಡ ಬಿಲ್ಲನ್ನು ಮನ್ನಾ ಮಾಡುವಂತೆ ಸರ್ಕಾರಕ್ಕೆ ಮಂಡ್ಯದ ಎಂಎಲ್ ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದಾರೆ.
ದಿನೇಶ್ ಗೂಳಿಗೌಡ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಹಿ ಮಾಡಿದ್ದು, ಈ ಸಂಬಂಧ ಪರಿಶೀಲಿಸಿ ಸಚಿವ ಸಂಪುಟದ ಮುಂದೆ ತರುವಂತೆ ಹಣಕಾಸು ಇಲಾಖೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ.