Saturday, April 19, 2025
Google search engine

Homeರಾಜಕೀಯಇಂದು ಸರ್ಕಾರದ ವಿರುದ್ದ  ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ

ಇಂದು ಸರ್ಕಾರದ ವಿರುದ್ದ  ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ

ಬೆಂಗಳೂರು:  ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ವಿಧಾನಸೌಧದ ಒಳಗಡೆ ಮತ್ತು ಹೊರಗಡೆ ಏಕಕಾಲದಲ್ಲಿ 2 ಕಡೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ನಗರದ ಫ್ರೀಡಂ ಪಾರ್ಕ್ ​ನಲ್ಲಿ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ ನೇತೃತ್ವದಲ್ಲಿ ಬೆಳಗ್ಗೆ 10.30 ರಿಂದ ಸಂಜೆಯವರೆಗೆ ಪ್ರತಿಭಟನೆ ನಡೆಯಲಿದೆ.  ಮಾಜಿಸಿಎಂ ಬಿಎಸ್ ವೈಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಡಿ.ವಿ ಸದಾನಂದ ಗೌಡ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಮಾಜಿ ಸಚಿವರು, ಸಂಸದರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಸಾಥ್ ನೀಡಲಿದ್ದಾರೆ.

ವಿಧಾನಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಬಿಜೆಪಿ ಈಗಾಗಲೇ ತೀರ್ಮಾನ ಮಾಡಿದ್ದು, ಉಭಯ ಸದನದ ಒಳಗೆ ಬಿಜೆಪಿ ಸದಸ್ಯರು ಹೋರಾಟ ನಡೆಸಲಿದ್ದಾರೆ.

ಹಾಗೆಯೇ ವಿಧಾನ ಪರಿಷತ್​​ನಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿ ಪ್ರತಿಭಟನೆಗೆ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ.

RELATED ARTICLES
- Advertisment -
Google search engine

Most Popular