ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನು ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆರೋಪಿಗಳ ಹೇಳಿಕೆಯ ಆಧಾರದ ಮೇರೆಗೆ ನಾಗೇಂದ್ರ ಅವರ ಪತ್ನಿಯನ್ನು ವಶಕ್ಕೆ ಪಡೆಯಲಾಗಿದೆ.
ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದ ಬಳಿಕ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಮಂಜುಳಾ ಅವರಿಗೆ ಬಂಧನ ಭೀತಿ ಎದುರಾಗಿದೆ.