ಶಿವಮೊಗ್ಗ : ಕರಾವಳಿ ಭಾಗದಲ್ಲಿ ವರುಣ ಇದೀಗ ಅಬ್ಬರಿಸುತ್ತಿದ್ದು ಹಲವು ಕಡೆ ಮಳೆಯ ತೀವ್ರತೆಯಿಂದ ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಇದೀಗ ಉಡುಪಿ ಮತ್ತು ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದರಿಂದ ಇಂದು ಗುರುವಾರ ಉಡುಪಿ ಜಿಲ್ಲೆಯ ಎರಡು ತಾಲೂಕು ಹಾಗೂ ಶಿವಮೊಗ್ಗದ ಆರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯ ೬ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ತೀರ್ಥಹಳ್ಳಿ, ಸೊರಬ, ಸಾಗರ, ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ನೀಡಿ ಡಿಡಿಪಿಐ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಶಿಕಾರಿಪುರ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ ಬೈಂದೂರು ಹಾಗೂ ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.