Sunday, April 20, 2025
Google search engine

Homeರಾಜ್ಯಸುದ್ದಿಜಾಲಡೆಂಗ್ಯೂ: ಮನೆ ಒಳಾಂಗಣದಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸಿ

ಡೆಂಗ್ಯೂ: ಮನೆ ಒಳಾಂಗಣದಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸಿ

ಬಳ್ಳಾರಿ: ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಮನೆ ಒಳಗಿನ ಫ್ರಿಜ್, ಎರ್‍ಕೂಲರ್, ಅಲಂಕೃತ ಗಿಡಗಳ ಕುಂಡಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಡೆಂಗ್ಯು ಹರಡದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಈಡಿಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಸಹ ಲಕ್ಷಣಗಳಾಧರಿಸಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಹೊರತಾಗಿ ಸಾರ್ವಜನಿಕರು ಮನೆಯ ಒಳಗೆ ಸೊಳ್ಳೆ ಉತ್ಪತ್ತಿಯಾಗುವಂತಹ ಫ್ರಿಜ್‍ನ ಹಿಂಭಾಗ, ಅಲಂಕೃತವಾಗಿ ಬಳಸುವ ಮನಿಪ್ಲಾಂಟ್ ಕುಂಡಗಳು (ಬಾಟಲ್), ಸ್ನಾನಗೃಹದಲ್ಲಿ ಮುಚ್ಚಳ ಮುಚ್ಚಲು ಸಾಧ್ಯವಿಲ್ಲದ ಸಿಮೆಂಟ್ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರು ಖಾಲಿ ಮಾಡಬೇಕು ಎಂದು ಹೇಳಿದ್ದಾರೆ.

ಶಿಕ್ಷಕರು ಶಾಲೆ, ಅಂಗನವಾಡಿಗಳಲ್ಲಿ ಪ್ರಾರ್ಥನೆ ವೇಳೆ ಮಕ್ಕಳಿಗೆ ತಮ್ಮ ಮನೆಯಲ್ಲಿ ನೀರು ಸಂಗ್ರಹಾರಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ನೀರು ತುಂಬಿದ ನಂತರ ಮುಚ್ಚಳ ಮುಚ್ಚುವಂತೆ ಪಾಲಕರ ಮನವೊಲಿಸಲು ತಿಳಿಸಬೇಕು. ಲಾರ್ವಾ ಪತ್ತೆ ಹಚ್ಚಿ ಮಾಹಿತಿ ತಿಳಿಸಿದ ವಿದ್ಯಾರ್ಥಿಗಳಿಗೆ ಎಲ್ಲರ ಸಮ್ಮುಖದಲ್ಲಿ ಪ್ರಶಂಸಿಸಬೇಕು ಎಂದು ಅವರು ಕೋರಿದ್ದಾರೆ.

ವಾರದಲ್ಲಿ ಒಂದು ದಿನ ಡೆಂಗ್ಯು ರೋಗ ಹರಡುವ ಈಡಿಸ್ ಸೊಳ್ಳೆ ನಿರ್ಮೂಲನಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಂಬಲದೊಂದಿಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳ ಸಮನ್ವಯದೊಂದಿಗೆ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ, ವಾರ್ಡ್‍ಗಳಿಗೆ ಸಿಬ್ಬಂದಿಯವರೊಂದಿಗೆ ಭೇಟಿ ನೀಡಿದಾದ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular