ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ: ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ನಿವಾಸಿ ಗೀತಾರಾಘು ಎಂಬವರಿಗೆ ವಾಸದ ಮನೆಯ ಗೋಡೆ ಸತತವಾಗಿ ಸುರಿಯುತ್ತಿರುವ ಮಳೆಗೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ನಾವು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು ವಾಸವಾಗಿರುವ ಮನೆಯ ಗೋಡೆ ಕುಸಿದು ಬಿದ್ದ, ಪರಿಣಾಮ ನಮಗೆ ವಾಸವಿರಲು ತುಂಬಾ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಗಮನಹರಿಸಿ ನಮಗೆ ಪರಿಹಾರ ನೀಡಬೇಕು ಎಂದು ಗೀತಾ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.