Thursday, April 17, 2025
Google search engine

HomeUncategorizedಶಿವಮೊಗ್ಗ: ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಅಂತರಗಂಗೆ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ತೋಟಗಾರಿಕೆ ಇಲಾಖೆ ಉಪನಿರ್ದೇಶಕ, ಅಂತರಗಂಗೆ ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪಗಳ ಹಿನ್ನೆಲೆಯಲ್ಲಿ ಇಲ್ಲಿನ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪ್ರಕಾಶ್ ಹಾಗೂ ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಶುಕ್ರವಾರ ಮುಂಜಾನೆ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕೃಷಿ ನಗರದಲ್ಲಿರುವ ಪ್ರಕಾಶ್ ನಿವಾಸ ಹಾಗೂ ಅಂತರ ಗಂಗೆಯಲ್ಲಿರುವ ನಾಗೇಶ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ನಾಗೇಶ್ ಭದ್ರಾವತಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡ ಆಗಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ ಆಪ್ತ ಬಳಗದಲ್ಲಿದ್ದಾರೆ. ಈ ಹಿಂದೆ ಭದ್ರಾವತಿ ತಾಲ್ಲೂಕಿನ ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular