Sunday, April 20, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಅವರದ್ದು ಪಾರದರ್ಶಕ ಭ್ರಷ್ಟ ಸರ್ಕಾರ: ಸಿ.ಟಿ. ರವಿ ಆರೋಪ

ಸಿಎಂ ಸಿದ್ದರಾಮಯ್ಯ ಅವರದ್ದು ಪಾರದರ್ಶಕ ಭ್ರಷ್ಟ ಸರ್ಕಾರ: ಸಿ.ಟಿ. ರವಿ ಆರೋಪ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ. ಸಿದ್ದರಾಮಯ್ಯ ಅವರದ್ದು ಪಾರದರ್ಶಕ ಭ್ರಷ್ಟ ಸರ್ಕಾರ. ಇಲಾಖೆಗಳಲ್ಲಿ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ. ಈ ರೇಟ್ ಕಾರ್ಡ್ ಫಿಕ್ಸ್ ಸತ್ಯ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್‌ನ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ರೇಟ್ ಕಾರ್ಡ್ ವಿರುದ್ಧ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಸಿ.ಟಿ ರವಿ ಅವರು, ಮುಡಾ, ವಾಲ್ಮೀಕಿ ನಿಗಮದ ಅಕ್ರಮಗಳ ಬೆನ್ನಲ್ಲೇ ಇದೀಗ ದೋಸ್ತಿಗಳು ಸರ್ಕಾರದ ವಿರುದ್ಧ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ. ರೇಟ್ ಕಾರ್ಡ್ ಸತ್ಯ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇವರ ಭ್ರಷ್ಟಾಚಾರ ಬರಿಗಣ್ಣಿಗೆ ಕಾಣುತ್ತದೆ. ೪೦ ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಎನ್ನುವ ಸಿದ್ದರಾಮಯ್ಯ ಅವರ ಮಾತನ್ನು ಯಾರೂ ಒಪ್ಪಲ್ಲ ಎಂದು ಹೇಳಿದರು.

ಪ್ರತಿಭಟನೆ ವೇಳೆ ಯಾವ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳಿಗೆ ಎಷ್ಟೆಷ್ಟು ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ ಎನ್ನುವ ಪೋಸ್ಟರ್‌ಗಳನ್ನ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರದರ್ಶಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

RELATED ARTICLES
- Advertisment -
Google search engine

Most Popular