Saturday, April 19, 2025
Google search engine

Homeಅಪರಾಧಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು, ಇನ್ನಿಬ್ಬರಿಗೆ ಗಾಯ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು, ಇನ್ನಿಬ್ಬರಿಗೆ ಗಾಯ

ಮಂಗಳೂರು (ದಕ್ಷಿಣ ಕನ್ನಡ): ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ.
ಕಾರ್ತಿಕ್ ಎಂಬುವವರು ಮೃತಪಟ್ಟವರು. ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.
ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular