ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಇಹಲೋಕ ತ್ಯಜಿಸಿದ್ದಾರೆ. ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ವಿನೋದ್ ದೊಂಡಾಲೆ ಅವರು ಹಣಕಾಸಿನ ವಿಚಾರಕ್ಕೆ ನಾಗರಬಾವಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ವಿನೋದ್ ದೊಂಡಾಲೆ ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ವಿನೋದ್ ಕರಿಮಣಿ ಶಾಂತಂ ಪಾಪಂ ಸೇರಿದಂತೆ ಹಲವು ಧಾರವಾಹಿಗಳಿಗೆ ನಿರ್ದೇಶನ ಮಾಡುತ್ತಿದ್ದರು. ಸದ್ಯ ನಿನಾಸಮ್ ಸತೀಶ್ ನಟನೆಯ ಅಶೋಕ ಬ್ಲೇಡ್ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲ ಮಾಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅವರು ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್.ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಿಗೆ ವಿನೋದ್ ಕೆಲಸ ಮಾಡಿದ್ದರು