ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನದಿಗೆ ನೀರು ಬಿಡುಗಡೆಯಾದಾಗ ನೆರೆ ಪರಿಸ್ಥಿತಿಯಿಂದ ಹಾನಿಯಾಗುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗೊಳ, ಪಶ್ಚಿಮ ವಾಹಿನಿ, ಬಲಮುರಿ, ಕರೇಕುರ, ಎಡಮುರಿಗೆ ಭೇಟಿ ನೀಡಿ ಅಧಿಕಾರಿಗಳು ಮಾಡಿಕೊಂಡಿರುವ ಸಿದ್ಧತೆ ಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು