Sunday, April 20, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ : ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಕೆ.ಆರ್.ನಗರ : ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಪಟ್ಟಣದ ಅಖಿಲ ನಾಮಧಾರಿ ಗೌಡ ಸಮುಧಾಯ ಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ , ಜಿ.ಪಂ. ಸಿಇಒ ಗಾಯಿತ್ರಿ, ತಹಶೀಲ್ದಾರ್‌ಗಳಾದ ಸಿ.ಎಸ್.ಪೂರ್ಣಿಮ, ನರಗುಂದ್ ಸಮ್ಮುಖದಲ್ಲಿ ಏರ್ಪಡಿಸಲಾಗಿತ್ತು.

ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಸಾರ್ವಜನಿಕರು ವೈಯುಕ್ತಿಕ ವಿಚಾರ ಹಾಗೂ ಗ್ರಾಮಗಳ ಸಮಸ್ಯೆ, ಸಾರ್ವಜನಿಕರ ಹಿತದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳ ಬಗ್ಗೆ ತಮ್ಮ ಆಹವಾಲು ಸಲ್ಲಿಸಿದರು, ಕೆ.ಆರ್.ನಗರ ತಾಲೂಕು ೧೮೦, ಸಾಲಿಗ್ರಾಮ ತಾಲೂಕಿನಿಂದ ೧೨೪ ಮಂದಿಯ ಅಹವಾಲು ಆಲಿಸಿದ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಹಲವಾರು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿ ಉಳಿದ ಅರ್ಜಿಗಳಿಗೆ ಶೀಘ್ರದಲ್ಲಿಯೇ ಉತ್ತರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ಬಹುತೇಕ ಮಂದಿ ಸಕಾಲದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ನೀಡುತ್ತಿಲ್ಲ ವರ್ಷಾನುಘಟ್ಟಲೆ ಅಲೆದಾಡಿಸುತ್ತಿದ್ದಾರೆ, ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಒತ್ತುವರಿ ಮಾಡಲಾಗಿದ್ದು ಅವುಗಳನ್ನು ತೆರವು ಮಾಡಿ ರೈತರು ಮತ್ತು ಎತ್ತಿನಗಾಡಿ, ಟ್ರಾಕ್ಟರ್ ಸೇರಿದಂತೆ ಇತರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು. ಸಾಲಿಗ್ರಾಮ ಮತ್ತು ಕೆ.ಆರ್.ನಗರದ ಪೊಲೀಸ್ ಠಾಣೆಗಳಲ್ಲಿ ನೊಂದವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಹಣದ ಆಸೆಗಾಗಿ ಪೊಲೀಸ್ ಅಧಿಕಾರಿಗಳು ದೂರುಗಳನ್ನು ಸ್ವೀಕರಿಸದೆ ಉಳ್ಳವರ ಪರವಾಗಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಅಂತಹ ಪೊಲೀಸರ ವಿರುದ್ದ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಹಲವು ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಗ್ರಾಮ ಪಂಚಾಯಿತಿಗಳ ಪಿಡಿಒಗಳು ಮತ್ತು ಪುರಸಭೆಯ ಅಧಿಕಾರಿಗಳು ಖಾತೆ ಬದಲಾವಣೆ ಮಾಡಲು ಹಾಗೂ ಮನೆ ನಿರ್ಮಾಣಕ್ಕೆ ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಪರವಾನಿಗೆ ನೀಡಲು ಲಂಚ ಬೇಡಿಕೆ ಹಿಡುತ್ತಾರೆ ಇದನ್ನು ತಪ್ಪಿಸಿ ಬಡ ಜನತೆಗೆ ಅನುಕೂಲ ಮಾಡಿಕೊಡಬೇಕು ಇದರ ಜತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ನೀಡಬೇಕೆಂದು ಹಲವು ಮಂದಿ ಮನವಿ ಸಲ್ಲಿಸಿದರು.

ಸಾಲಿಗ್ರಾಮ ತಾಲೂಕು ಆದ ನಂತರ ಸಮಸ್ಯೆಗಳ ಪರಿಹಾರಕ್ಕಾಗಿ ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿದ್ದು ಕಡತಗಳು ಕಳ್ಳತನವಾಗಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಡಿ.ರವಿಶಂಕರ್ ಶೀಘ್ರದಲ್ಲಿಯೇ ಸಾಲಿಗ್ರಾಮ ತಾಲೂಕು ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಎಲ್ಲಾ ಕಡತಗಳನ್ನು ಪರಿಶೀಲನೆ ಮಾಡಲಿದ್ದು, ತಪ್ಪಿಸತ್ಥ ಅಧಿಕಾರಿಗಳ ವಿರುದ್ದ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಪಟ್ಟಣದ ವಿದ್ಯಾ ನಗರದ ನಿವಾಸಿಗಳ ಮುಖ್ಯ ಸಂಪರ್ಕ ರಸ್ತೆಗೆ ಮಸೀದಿ ಕಮಿಟಿಯವರು ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಇದರಿಂದ ಬಡಾವಣೆಯ ಜನತೆ ಓಡಾಡಲೂ ತೊಂದರೆಯಾಗುತ್ತಿದ್ದು ಕೂಡಲೇ ರಸ್ತೆ ಬಿಡಿಸಿಕೊಡಬೇಕೆಂದು ಮನವಿ ಸಲ್ಲಿಸಿದರು, ಇದಕ್ಕುತ್ತರಿಸಿದ ಜಿಲ್ಲಾಧಿಕಾರಿಗಳು ಬಡಾವಣೆಯ ನಿವಾಸಿಗಳು ಮತ್ತು ಮಸೀದಿ ಕಮಿಟಿ ಸದಸ್ಯರ ಸಭೆ ನಡೆಸಿ ಸಮಸ್ಯೆಯನ್ನು ಅಂತ್ಯಗೊಳಿಸುವುದಾಗಿ ಭರವಸೆ ನೀಡಿದರು.

ಬೆಳಗ್ಗೆ ೧೧ ಗಂಟೆಗೆ ಪ್ರಾರಂಭಗೊಂಡ ಸಭೆ ಸಂಜೆ ೪ ಗಂಟೆಯವರೆಗೂ ನಡೆಯಿತ್ತು ಅರ್ಜಿ ಸಲ್ಲಿಸಿದರವರ ಜತೆಗೆ ಇತರ ನೂರಾರು ಮಂದಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆ, ನೀರಾವರಿ ಇಲಾಖೆ, ಸಾರಿಗೆ ಸಂಸ್ಥೆ, ಲೋಕೋಪಯೋಗಿ ಇಲಾಖೆ, ಕುಡಿಯುವ ನೀರು ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಇಲಾಖೆಗೆ ಸಂಬಂಧಿಸಿದಂತೆ ಹಲವು ದೂರುಗಳನ್ನು ಮೌಖಿಕವಾಗಿ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ನೀಡಿ ತ್ವರಿತವಾಗಿ ಬಗೆಹರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ನಗರ ಯೋಜನಾ ಪ್ರಾಧಿಕಾರಿದ ಅಧ್ಯಕ್ಷ ಗಡ್ಡಮಹೇಶ್, ನಿರ್ದೇಶಕರಾದ ಸರಿತಾಜವರಪ್ಪ, ಸೈಯದ್‌ಜಾಬೀರ್, ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ಶಿವಕುಮಾರ್, ಮಾಜಿ ಸದಸ್ಯ ಕೆ.ವಿನಯ್ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular