ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ೮೨ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಅಕ್ಟೋಬರ್ ೨೦೨೨ ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಖರ್ಗೆ ಅವರು ಇಂದು ಭಾನುವಾರ ೮೨ ನೇ ವರ್ಷಕ್ಕೆ ಕಾಲಿಟ್ಟರು.
ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಹೇಳಿದ್ದಾರೆ.