ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ದೂರದ ಗುಂಡಾ ಖವಾಸ್ ಗ್ರಾಮದಲ್ಲಿ ಹೊಸದಾಗಿ ಸ್ಥಾಪಿಸಲಾದ ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ಇಂದು ಗುಂಡು ಹಾರಿಸಿದಾಗ ಸೈನಿಕ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಮಧ್ಯೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬಾರ್ತ್ವಾಲ್ ಮಾತನಾಡಿ, ದೂರದ ಹಳ್ಳಿಯಲ್ಲಿ ಸೇನಾ ನೆಲೆ ಮೇಲೆ ನಡೆದ ಪ್ರಮುಖ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದರು. ಗುಂಡಿನ ದಾಳಿ ನಡೆಯುತ್ತಿದೆ ಮತ್ತು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ಜಮ್ಮುವಿನಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಅರೆಸೈನಿಕ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳೊಂದಿಗೆ ಜಂಟಿ ಸಭೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಎರಡು ದಿನಗಳ ನಂತರ ಸೈನಿಕ ಗಾಯಗೊಂಡಿದ್ದಾನೆ. ಜಮ್ಮು ಪ್ರದೇಶದ ಆರು ಜಿಲ್ಲೆಗಳಲ್ಲಿ ಸುಮಾರು ಒಂದು ಡಜನ್ ಭಯೋತ್ಪಾದಕ ದಾಳಿಗಳಲ್ಲಿ ೧೧ ಭದ್ರತಾ ಸಿಬ್ಬಂದಿ, ಗ್ರಾಮ ರಕ್ಷಣಾ ಸಿಬ್ಬಂದಿ ಮತ್ತು ಐದು ಭಯೋತ್ಪಾದಕರು ಸೇರಿದಂತೆ ೨೭ ಜನರು ಸಾವನ್ನಪ್ಪಿದ್ದಾರೆ.