Sunday, April 20, 2025
Google search engine

Homeರಾಜ್ಯವಚನ ಚಳುವಳಿ, ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಪ್ರಮುಖರು: ಎಡಿಸಿ ಚಂದ್ರಯ್ಯ

ವಚನ ಚಳುವಳಿ, ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಪ್ರಮುಖರು: ಎಡಿಸಿ ಚಂದ್ರಯ್ಯ

ರಾಮನಗರ: ಹನ್ನೆರಡನೇಯ ಶತಮಾನದ ವಚನ ಚಳುವಳಿ ಹಾಗೂ ಸಾಮಾಜಿಕಕ್ರಾಂತಿಯ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಅವರು ಪ್ರಮುಖರಾಗಿದ್ದಾರೆ. ಅವರ ವಚನ ಹಾಗೂ ಚಿಂತನೆಗಳು ಮನುಕುಲದ ಬೆಳವಣಿಗೆಗೆ ದಾರಿ ದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಚಂದ್ರಯ್ಯಆರ್.ಅವರು ಬಣ್ಣಿಸಿದರು.

ಅವರು ಜು.೨೧ರ ಭಾನುವಾರ ನಗರದ ಕಂದಾಯ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿಇಲಾಖೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಸಮಾಜದಲ್ಲಿಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದ ಹಡಪದಅಪ್ಪಣ್ಣ ಅವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದು ಹೇಳುವ ಅನುಭವ ಮಂಟಪದಲ್ಲಿ ಬಸವಣ್ಣ ಅವರ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿದ್ದರು ಎಂದರು.

ಶಿವಶರಣ ಹಡಪದ ಅಪ್ಪಣ್ಣ ಅವರುತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ.ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ, ಸಮಾಜದಲ್ಲಿಕ್ರಾಂತಿಕಾರಕ ಬದಲಾವಣೆಗಳನ್ನು ತರಲುತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸಿದ್ದಾರೆ.ಅವರ ವಚನಗಳಲ್ಲಿನ ತತ್ವ ಹಾಗೂ ಚಿಂತನೆಗಳು ಇಂದಿಗೂ ಅನುಕರಣೀಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕರಮೇಶ್ ಬಾಬು, ಸವಿತಾ ಸಮಾಜ ಸಂಘದಅಧ್ಯಕ್ಷ ಶ್ರೀನಿವಾಸ್, ಸಂಘದ ಪದಾಧಿಕಾರಿಗಳಾದ ಹಾಗೂ ಇತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular