ಮಂಡ್ಯ: ಲಾರಿಯೊಂದು ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಾರ್ಕಾಲು ಗೇಟ್ ಬಳಿ ನಡೆದಿದೆ.
ಕೋದನಕೊಪ್ಪಲು ಗ್ರಾಮದ ಕರಿಯಪ್ಪ (56) ಮೃತಪಟ್ಟ ದುರ್ದೈವಿ
ಬಸವೇಗೌಡ ಗಾಯಾಳು.
ಮಳವಳ್ಳಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಲಾರಿ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಕಿರುಗಾವಲು ಪೊಲೀಸರುಭೇಟಿ ನೀಡಿ ಪರಿಶೀಲನೆ ನಡೆಸಿದರು
ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.