ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ತಲಪಾಡಿ, ಕೋಟೆಕಾರ್, ಬೀರಿ, ತೊಕ್ಕೊಟ್ಟು, ಕಲ್ಲಾಪು, ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬದಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಇಂದು ಮಂಗಳೂರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕಾರ್ಯಾಚರಣೆ ನಿಲ್ಲಿಸುವಂತೆ ಮನವಿ ಸಲ್ಲಿಸಲಾಯಿತು.
