ನವದೆಹಲಿ: ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ ೩೦೦ ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ.
ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘೧ ಕೋಟಿ ಕುಟುಂಬಗಳು ಪ್ರತಿ ತಿಂಗಳು ೩೦೦ ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಗೆ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.
ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಈ ಸೌಲಭ್ಯ ನೀಡಲಾಗುತ್ತಿದೆ. ಪಿರ್‌ಪೈಂಟ್‌ನಲ್ಲಿ ಹೊಸ ೨,೪೦೦ ಮೆಗಾವ್ಯಾಟ್ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವುದು ಸೇರಿದಂತೆ ೨೧,೪೦೦ ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಯೋಜನೆಗಳನ್ನು ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.