ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ.
ಒಂದು ತಿಂಗಳ ಜೈಲು ವಾಸದ ಬಳಿಕ ಜೈಲಿನಿಂದ ಹೊರ ಬಂದಿರುವ ಅವರು, ತನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, ಶೀಘ್ರ ಸತ್ಯ ಹೊರ ಬರಲಿದೆ. ಎಲ್ಲದಕ್ಕೂ ಎರಡು-ಮೂರು ದಿನಗಳಲ್ಲಿ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.
ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಬಳಿಕ ಜೂನ್ ೨೩ ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಮೊದಲಿಗೆ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸೋಮವಾರ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.