Tuesday, April 8, 2025
Google search engine

HomeUncategorizedರಾಷ್ಟ್ರೀಯಜಮ್ಮು-ಕಾಶ್ಮೀರ: ಉಗ್ರರೊಂದಿಗೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಉಗ್ರರೊಂದಿಗೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಬಳಿ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಕುಪ್ವಾರದ ಕೋವುಟ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ನೀಡಲಾಗಿತ್ತು. ಸೇನೆಯು ಜಮ್ಮು-ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಭಾರತೀಯ ಸೇನೆಯ ಕಾರ್ಯಾಚರಣೆ ವೇಳೆ ಉಗ್ರರು ಸಹ ಗುಂಡಿನ ಚಕಮಕಿ ನಡೆಸಿದರು. ಈ ವೇಳೆ ಸೈನಿಕ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆಯು ತಿಳಿಸಿದೆ.

ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲ್ಯಾನ್ಸ್‌ ನಾಯಕ್‌ ಸುಭಾಷ್‌ ಕುಮಾರ್‌ ನಂತರ ಕೊನೆಯುಸಿರೆಳೆದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಸೇನೆಗೆ ಹಸ್ತಾಂತರಿಸಲಾಗಿದೆ.

RELATED ARTICLES
- Advertisment -
Google search engine

Most Popular