ಮಂಡ್ಯ: ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು ಹಡಪದ ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು ಎಂದು ನಗರಸಭೆ ಕಚೇರಿಯ ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯು ಕಲಾಮಂದಿರದಲ್ಲಿ ಜರುಗಿತು.
ಸಮಾಜದಲ್ಲಿ ಸಮಾನತೆ ಸಾಧಿಸಬೇಕಾದರೆ ಮೇಲು ಕೀಳು ಎಂಬ ಅನಿಷ್ಠ ಪದ್ಧತಿಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಶಿವಶರಣ ಹಡಪದ ಅಪ್ಪಣ್ಣ ನವರು ತಮ್ಮ ವಚನಗಳಲ್ಲಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ಸಮಾಜ ಸೇವಕರಾದ ಶಶಿಧರ್ ಕೆ.ಬಿ, , ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷರಾದ ಸಂದೇಶ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಅಧ್ಯಕ್ಷರಾದ ಅಂಜನಪ್ಪ, ಮುಖಂಡರುಗಳಾದ ಸ್ವಾಮಿ, ಬಸವರಾಜು. ಆರ್ ಜಯರಾಮ್ ಹಾಗೂ ಇನ್ನಿತರರಿದ್ದರು.