Sunday, April 20, 2025
Google search engine

Homeಸ್ಥಳೀಯಮಾದಕ ವಸ್ತು ಸೇವನೆ ಆರೋಗ್ಯಕ್ಕೆ ಹಾನಿಕರ : ಧರ್ಮ ಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಜಾಗೃತಿ...

ಮಾದಕ ವಸ್ತು ಸೇವನೆ ಆರೋಗ್ಯಕ್ಕೆ ಹಾನಿಕರ : ಧರ್ಮ ಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಜಾಗೃತಿ ಕಾರ್ಯಕ್ರಮ


ಹನೂರು: ಇಂದಿನ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷದನೀಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ತಡೆಯಲು ಪಠ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಟ ಪರಿಣಾಮಗಳ ಕುರಿತು ಪಾಠಗಳನ್ನು ಅಳವಡಿಸಿ ಸರಿಯಾದ ಮಾಹಿತಿ ನೀಡುವುದರಿಂದ ಈ ಸಮಸ್ಯೆ ಹೋಗಲಾಡಿಸಬಹುದು ಎಂದು ಧರ್ಮಸ್ಥಳ ಸಂಸ್ಥೆಯ ಕೌದಳ್ಳಿ ವಲಯದ ಮೇಲ್ವಿಚಾರಕ ಮಂಜುನಾಥ್ ಅಭಿಪ್ರಾಯಪಟ್ಟರು.
ತಾಲೂಕಿನ ಕೌದಳ್ಳಿ ಗ್ರಾಮದ ಮಹದೇಶ್ವರ ಪ್ರೌಢ ಶಾಲೆಯಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಕುರಿತು ಆರೋಗ್ಯ ಸಹಾಯಕಿಯಾದ ಶಿಲ್ಪರವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು, ಕ್ಯಾನ್ಸರ್ ಮತ್ತು ಇನ್ನೂ ಮಾರಕ ಖಾಯಿಲೆಗಳು ಬರುತ್ತಿದ್ದು ಇದರಿಂದಾಗಿ ಆಗುವ ಅನಾಹುತಗಳ ಬಗ್ಗೆ ಮತ್ತು ಇದನ್ನು ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು, ಶಾಲಾ ಶಿಕ್ಷಕರಾದ ರಮೇಶ್ ಕುಮಾರ್ ರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುತ್ತಿದ್ದರೆ ಅದರಿಂದ ಆಗುವ ತೊಂದರೆಗಳ ಬಗ್ಗೆ ನಿಮ್ಮ ತಂದೆ ತಾಯಂದಿರಿಗೆ ಮನವರಿಕೆ ಮಾಡಿ ಒಳ್ಳೆಯ ಜೀವನವನ್ನು ಕಟ್ಟಿಕೊಳ್ಳಿ ಎಂದು ಮಾಹಿತಿ ನೀಡಿದರು.
ನಂತರ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯರಾದ ರಾಮಕೃಷ್ಣ ಜಗತ್ತಿನಲ್ಲಿ ಸುಮಾರು ೨೦೦ ಮಿಲಿಯನ್ ಅಷ್ಟು ಜನರು ಮಾದಕ ವ್ಯಸನದಿಂದ ಬಳಲುತ್ತಿದ್ದಾರೆ. ಆಲ್ಕೋಹಾಲ್, ಸಿಗರೆಟ್, ತಂಬಾಕು, ಡ್ರಗ್ಸ್ ನತಂಹ ಮಾದಕ ದ್ರವ್ಯಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದ್ದು, ದುಷ್ಟ ಪರಿಣಾಮಗಳ ಅರಿವಿದ್ದರೂ ಕೂಡ ಯುವಜನತೆ ವ್ಯಸನಗಳಿಗಾಗಿ ಅದರಿಂದ ಹೊರಬರಲಾಗದೆ ಜೀವವನ್ನೇ ಕಳೆದುಕೊಳ್ಳುತ್ತಿದ್ದು ಇದರಿಂದ ಆಗುವ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೋಷಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುವುದರಿಂದ ದೇಶದ ಆರೋಗ್ಯ ಮತ್ತು ಆರ್ಥಿಕ ಸ್ಥಿತಿ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಹೇಳಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆ ಮುಖ್ಯೋಪಾಧ್ಯಾಯರು ಮಾದಕ ವ್ಯಸನಗಳ ಬಗ್ಗೆ ಪ್ರತಿದಿನ ಪ್ರಕರಣಗಳು ದಾಖಲಾಗುತ್ತಿವೆ ಸಾಮಾನ್ಯವಾಗಿ ಮನೆಯಿಂದ ಹೊರ ಉಳಿದವರು, ಸ್ನೇಹಿತರ ಜೊತೆಗೂಡಿದವರು ಅಥವಾ ಮಾನಸಿಕ ನೋವು ಅನುಭವಿಸುವ ವ್ಯಕ್ತಿಗಳು ಮಾದಕ ವ್ಯಸನಿಗಳಾಗುತ್ತಾರೆ. ಚಿಕ್ಕ ಮಕ್ಕಳಿನಿಂದ ಹಿಡಿದು ಯುವಕರು ವಿದ್ಯಾವಂತರು ಬುದ್ಧಿವಂತರು ಇಂತಹ ಚಟುವಟಿಕೆಗಳಿಗೆ ಮಾರು ಹೋಗುತ್ತಿದ್ದು ಇದರಿಂದ ಸಮಾಜಕ್ಕೆ ಕುಟುಂಬಗಳಿಗೆ ಮತ್ತು ದೇಶದ ಭದ್ರತೆಗೂ ದಕ್ಕೆ ತರುವಂತ ಸಮಸ್ಯೆ ಆಗುತ್ತಿದೆ ಮಾದಕ ವ್ಯಸನದಿಂದ ಹೊರಬರಲು ಕ್ರೀಡೆ ಕಲೆ ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿ ಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣರವರು, ವಲಯದ ಮೇಲ್ವಿಚಾರಕರಾದ ಮಂಜುನಾಥ್ ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular