ಮಂಡ್ಯ: ಸಾಲಗಾರರ ಕಿರುಕುಳ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ತಂಗಳಗೆರೆ ಗ್ರಾಮದಲ್ಲಿ ನಡೆದಿದೆ.
ಚಂದ್ರಶೇಖರ್(34) ಮೃತ ರೈತ.
ಚಂದ್ರಶೇಖರ ಸಾಲ ಮಾಡಿ ಬೋರ್ ವೆಲ್ ಕೊರೆಸಿದ್ದ. ಕಳೆದ ವರ್ಷ ಮಳೆ, ಬೆಳೆ ಇಲ್ಲದೇ ನಷ್ಟ ಅನುಭವಿಸುವಂತಾಗಿತ್ತು. ಕೃಷಿಗಾಗಿ, ಮನೆ ಕಟ್ಟಲು, ಬ್ಯಾಂಕಿನಿಂದ ಹಾಗೂ ಕೈ ಸಾಲ ಮಾಡಿದ್ದ. ಸಾಲ ಕೊಟ್ಟವರ ಕಿರುಕುಳ ಹೆಚ್ಚಾದ ಹಿನ್ನೆಲೆ. ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.