ಮಂಡ್ಯ: ಸ್ವಚ್ಛತೆಯನ್ನು ಕಾಪಾಡಿ ಹಾಗೂ ಸೊಳ್ಳೆಗಳ ನಿಯಂತ್ರಿಸುವ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಡೆಂಗ್ಯೂವನ್ನು ದೂರವಿಡಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತಿಳಿಸಿದರು.
ಅವರು ಇಂದು ಸಂಜಯ್ ಸರ್ಕಲ್ ಬಳಿ ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಕುರಿತು ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಈ ಹಿಂದೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚು ಕಂಡು ಬರುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಜನರಲ್ಲಿ ಉಂಟಾಗುತ್ತಿರುವ ಅರಿವು. ಸಾರ್ವಜನಿಕರು ಆರೋಗ್ಯ ಇಲಾಖೆ ತಿಳಿಸುವ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ಇಲಾಖೆಯೊಂದಿಗೆ ಕೈ ಜೋಡಿಸಿ ಎಂದರು. ಕಳೆದ ವಷದಲ್ಲಿ ಡೆಂಗ್ಯೂ ನಿಂದ ಯಾವುದೇ ಸಾವು ಸಂಭವಿಸಿಲ್ಲ. ಕಳೆದ ವರ್ಷ ೨೯೭ ಡೆಂಗ್ಯೂ ಪ್ರಕರಣಗಳು ವರದಿಯಾಗಿತ್ತು. ಈ ಬಾರಿ ೨೭ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಸಂಪೂರ್ಣವಾಗಿ ಕಡಿಮೆಯಾದಂತೆ ಡೆಂಗ್ಯೂ ಪ್ರಕರಣಗಳು ಕೂಡ ಕಡಿಮೆಯಾಗಬೇಕಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ: ಧನಂಜಯ್ ಅವರು ಮಾತನಾಡಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯ ಸುತ್ತಲೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ. ಸೊಳ್ಳೆಯ ಕಡಿತದಿಂದ ಡೆಂಗ್ಯೂ ಹರಡುತ್ತದೆ. ಸೊಳ್ಳೆ ಪರದೆಯನ್ನು ಬಳಸಿ ಎಂದರು.
ಇದೇ ಸಂದರ್ಭದಲ್ಲಿ ಮಾನಸಿಕ ರೋಗ ತಜ್ಞರಾದ ಡಾ. ಕೆ. ಪಿ ಅಶ್ವಥ್, ಸರ್ವೇಕ್ಷಣಾಧಿಕಾರಿ ಡಾ. ಸಂಜಯ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎಂ.ಎನ್.ಆಶಾಲತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೇಣುಗೋಪಾಲ್, ಖಅಊ ಅಧಿಕಾರಿ ಡಾ.ಅನಿಲ್ ಕುಮಾರ್, ಆಖಿಅ ಡಾ. ಮಮತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸೋಮಶೇಖರ್ ಎಂ.ಎಸ್ ಹಾಗೂ ಇನ್ನಿತರರಿದ್ದರು.