ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆಯು ಎರಡು ವರ್ಷಗಳ ಬಳಿಕ ಬುಧವಾರ ಸಂಜೆ ವೇಳೆಗೆ ಭರ್ತಿಯಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯದಲ್ಲಿ ಪ್ರಸಕ್ತ 49.452 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಅಣೆಕಟ್ಟೆಗೆ 42,045 ಕ್ಯೂಸೆಕ್ ಒಳ ಹರಿವಿದ್ದು, ಜಲಾಶಯದಿಂದ ನದಿಗೆ 40,914 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.