ಮಂಡ್ಯ: ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಜುಲೈ 30 ರಂದು ಸಕ್ಕರೆನಾಡು ಮಂಡ್ಯದ ರೈತ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನೋತ್ಸವವನ್ನು ಹಮ್ಮಿಕೊಂಡಿರುವುದಾಗಿ ಮನ್ಮುಲ್ ಉಪಾಧ್ಯಕ್ಷ ರಘುನಂದನ್ ತಿಳಿಸಿದರು.
ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಿಗೆ ಭತ್ತದ ಬೀಜ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಕೆಂಪೇಗೌಡರ ಜನ್ಮದಿನೋತ್ಸವ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.
ಕಾರ್ಯಕ್ರಮ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದ್ದಾರೆ.