Saturday, April 19, 2025
Google search engine

Homeರಾಜಕೀಯಕರ್ನಾಟಕ ಸರ್ಕಾರದಿಂದ ಎಸ್‌ಸಿ/ಎಸ್‌ಟಿ ಹಣ ದುರುಪಯೋಗ: ಪ್ರಲ್ಹಾದ್‌ ಜೋಶಿ

ಕರ್ನಾಟಕ ಸರ್ಕಾರದಿಂದ ಎಸ್‌ಸಿ/ಎಸ್‌ಟಿ ಹಣ ದುರುಪಯೋಗ: ಪ್ರಲ್ಹಾದ್‌ ಜೋಶಿ

ನವದೆಹಲಿ: ಕರ್ನಾಟಕ ಸರ್ಕಾರ ಎಸ್‌ಸಿ/ಎಸ್‌ಟಿ ಹಣವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.

ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಗರಣವು ಬಹಳ ದೊಡ್ಡ ಹಗರಣವಾಗಿದೆ ಎಂದು ತಿಳಿಸಿದ ಅವರು. ವಾಲ್ಮೀಕಿ ನಿಗಮದಲ್ಲಾದ ಹಗರಣ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಒತ್ತಡ ಹೆಚ್ಚಿದ ನಂತರ ಸಚಿವರು ರಾಜೀನಾಮೆ ನೀಡಿದ್ದಾರೆ. ಈಗ ಇಡಿ ಪ್ರವೇಶಿಸಿದಾಗ, ಅವರು ವಾಲ್ಮೀಕಿ ಬೋರ್ಡ್ ಹಗರಣದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಅತ್ಯಮೂಲ್ಯ ನಿವೇಶನಗಳನ್ನು ತಮ್ಮ ಪತ್ನಿ ಹೆಸರಿಗೆ ಮಂಜೂರು ಮಾಡಿಸಿದ್ದು 2013ರಲ್ಲಿ. ಆದರೆ, ಈ ಜಮೀನಿನ ಬಗ್ಗೆ 2018ರಲ್ಲಿ ಅಫಿಡವಿಟ್‌ನಲ್ಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.

2023ರಲ್ಲಿ ಅದರ ಮೌಲ್ಯ 25 ಲಕ್ಷ ರೂ. ಎಂದು ಅಫಿಡವಿಟ್ ಸಲ್ಲಿಸಿದರು. ಈಗ ಅದರ ಮೌಲ್ಯ ದುಪ್ಪಟ್ಟು ಎನ್ನುತ್ತಿದ್ದಾರೆ. ಈ ಎರಡೂ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಒತ್ತಾಯಿಸುತ್ತದೆ ಹಾಗೂ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular