ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, KRS ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಿದೆ .ಇದರಿಂದಾಗಿ ಕಾವೇರಿ ನದಿಯಲ್ಲಿ ಪ್ರವಾಹ ಆತಂಕ ಮತ್ತೆ ಎದುರಾಗಿದ್ದು, ಕಾ.ನೀ.ನಿಗಮದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ.
ಡ್ಯಾಂನಿಂದ ನದಿಗೆ 1,00,000 ಕ್ಯೂಸೆಕ್ಸ್ ನೀರು ಬಿಡುಗಡೆ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ ಪ್ರವಾಹ ಎಚ್ಚರಿಕೆ ಬಗ್ಗೆ ತುರ್ತು ಸಂದೇಶ ರವಾನಿಸಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ . ಪ್ರವಾಹ ಇಳಿಮುಖದಿಂದ ಕೊಂಚ ನೆಮ್ಮದಿಯಲ್ಲಿದ್ದ ಜನರಿಗೆ ಮತ್ತೆ ಆತಂಕ ಎದುರಾಗಿದೆ.
ಕಾವೇರಿ ನದಿಯ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದ್ದು , ಆಸ್ತಿಪಾಸ್ತಿ ಹಾಗು ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಕ್ಕೆ ಹೋಗಲು ಮನವಿ ಮಾಡಲಾಗಿದೆ.