Saturday, April 19, 2025
Google search engine

Homeಸ್ಥಳೀಯಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಮೈಸೂರು: ಡೆಂಗ್ಯೂ ಜ್ವರದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಇಂದು

 ಒಣ ದಿನ ಕಾರ್ಯಕ್ರಮವನ್ನು ಮೈಸೂರು ತಾಲ್ಲೂಕಿನ ಮೆಲ್ಲ ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ  ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು , ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಹಾಗೂ  ಜಿಲ್ಲಾ ಕ್ಷಿಪ್ರ ಪಡೆ ತಂಡದವರು, ಪ್ರಾಥಮಿಕ ಆರೋಗ್ಯ ಕೇಂದ್ರ ಮೆಲ್ಲಹಳ್ಳಿ, ಮೈಸೂರು ತಾಲ್ಲೂಕು, ಇಲ್ಲಿನ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

ಈ ದಿನದ ಕಾರ್ಯಕ್ರಮದಲ್ಲಿ 10 ತಂಡಗಳು 750 ಮನೆಗಳನ್ನು  ಸಮೀಕ್ಷೆ ಮಾಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular