ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ನಾಳೆ ಜುಲೈ ೨೭ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ ೧೦ ಗಂಟೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿ, ಶ್ರೀ ಮಲೈಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ ೨ ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ, ಕೊಳ್ಳೇಗಾಲ ತಾಲೂಕಿನ ಗ್ರಾಮಗಳಾದ ದಾಸನಪುರ, ಅರಳೆ, ಮುಳ್ಳೂರು, ಹಂಪಾಪುರ ಪ್ರದೇಶಗಳಲ್ಲಿ ನೀರಿನ ಪ್ರವಾಹದಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡುವರು. ಸಂಜೆ ೪.೩೦ ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.