Sunday, April 20, 2025
Google search engine

Homeಅಪರಾಧಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ.

ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್ ಯಡಿಯೂರಪ್ಪ ಅವರು ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಜೊತೆಗೆ ಈ ಹಿಂದೆ ಬಿಎಸ್‌ವೈ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಕೂಡ ವಿಸ್ತರಣೆ ಮಾಡಿದೆ. ಈ ಮೂಲಕ ಬಿಎಸ್‌ವೈ ಅವರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದುರು ನೀಡಿದ್ದರು. ಈ ದೂರಿನಲ್ಲಿ ತನ್ನ ಮಗಳಿಗೆ ಯಡಿಯೂರಪ್ಪ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

ದೂರಿನ ಮೇರೆಗೆ ಬಿಎಸ್‌ವೈ ಅವರ ವಿರುದ್ಧ ಪೊಲಿಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು. ಇನ್ನು ಈ ಕೇಸ್‌ನಲ್ಲಿ ಯಡಿಯೂರಪ್ಪ ಅವರು ಜಾಮೀನು ಪಡೆದುಕೊಂಡಿದ್ದು, ಇದೀಗ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular