Monday, April 21, 2025
Google search engine

Homeಅಪರಾಧಆತ್ಮಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್ ರದ್ದು

ಆತ್ಮಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್ ರದ್ದು

ಬೆಂಗಳೂರು: ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ದೋಷಾರೋಪಣೆ ಪಟ್ಟಿ ರದ್ದುಪಡಿಸಿ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಯೋಗ್ಯ ಪ್ರಕರಣವಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದೆ ಎಂದು ದಿ ಫೈಲ್ ವರದಿ ಮಾಡಿದೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ನಾಲ್ಕು ತಿಂಗಳಲ್ಲಿ ಈ ಆದೇಶ ಹೊರಬಿದ್ದಿದೆ . ಗೃಹ ಇಲಾಖೆಯಡಿಯಲ್ಲಿರುವ ಪ್ರಾಸಿಕ್ಯೂಷನ್ ಇಲಾಖೆಯು ೨೦೨೩ರ ಸೆ.೨೨ರಂದು ಹೊರಡಿಸಿರುವ ಆದೇಶದ ಪ್ರತಿ ಅಭಿಯೋಜನಾ ಇಲಾಖೆ ಮಾತ್ರವಲ್ಲ, ಸರ್ಕಾರಿ ವಕೀಲರು ಸಹ ಮೇಲ್ಮನವಿ ಸಲ್ಲಿಸಲು ಯೋಗ್ಯ ಪ್ರಕರಣವಲ್ಲ ಎಂದು ಅಭಿಪ್ರಾಯಿಸಿದ್ದರು. ಸರ್ಕಾರಿ ವಕೀಲರ ಅಭಿಪ್ರಾಯವನ್ನೇ ಎತ್ತಿ ಹಿಡಿದಿದ್ದ ಸರ್ಕಾರವು ಈ ಸಂಬಂಧ ಆದೇಶವನ್ನೂ (HD/11172/HCP1/2023 (COMPUTER NUMBER 1182854) (3571/AG-G-CRL/23-24- CRL R.P. NO 400/2014, HKCK-BENGALURU-DHARMA V/S STATE) ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ದೂರುದಾರರಾದ ಸಂಧ್ಯಾಲಕ್ಷ್ಮಿ ಎಂಬುವರು ಉಚ್ಛ ನ್ಯಾಯಾಲಯದ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ (ಎಸ್‌ಎಲ್ಪಿ ಕ್ರಿಮಿನಲ್ ಅರ್ಜಿ ಸಂಖ್ಯೆ ೪೩೦೯-೪೩೧೦/೨೦೨೪) ಸಲ್ಲಿಸಿದ್ದಾರೆ. ಇದರಲ್ಲಿ ಕರ್ನಾಟಕ ಸರ್ಕಾರವನ್ನು ಎರಡನೇ ಪ್ರತಿವಾದಿಯನ್ನಾಗಿಸಿದ್ದಾರೆ.

ಈ ಸಂಬಂಧ ಸುಪ್ರೀಂ ಕೋರ್ಟ್ ಕೂಡ ರಾಜ್ಯ ಸರ್ಕಾರಕ್ಕೆ ೨೦೨೪ರ ಮಾರ್ಚ್ ೧೯ರಂದು ನೋಟೀಸ್ ಕೂಡ ಜಾರಿಗೊಳಿಸಿದೆ. ಈ ಪ್ರಕರಣವನ್ನು ಹಿರಿಯ ವಕೀಲ ಡಿ ಎಲ್ ಚಿದಾನಂದ ಅವರಿಗೆ ವಹಿಸಿ ೨೦೨೪ರ ಏಪ್ರಿಲ್ ೫ರಂದು ಆದೇಶ ಹೊರಡಿಸಿದೆ.

ಹೀಗಾಗಿ ೨೦೨೩ರ ಸೆ.೨೨ರಂದು ಹೊರಡಿಸಿರುವ ಆದೇಶವನ್ನು ಪುನರಾವಲೋಕಿಸಬೇಕು ಮತ್ತು ೨೦೨೩ರ ಏಪ್ರಿಲ್ ೨೦ರಂದು ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯಕ್ಕೆ ಎಸ್‌ಎಲ್ಪಿ ಪರ ವಹಿಸಿಕೊಳ್ಳುವುದು ನ್ಯಾಯಸಮ್ಮತವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯ ಸಲ್ಲಿಸಿದ್ದಾರೆ. ಆದರೆ ಅಭಿಯೋಜನಾ ಇಲಾಖೆಯು ಇದುವರೆಗೂ ಈ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬದಲಿಗೆ ೨೦೨೩ರ ಏಪ್ರಿಲ್ ೨೪ರಂದು ಹೈಕೋರ್ಟ್ ಹೊರಡಿಸಿರುವ ಆದೇಶದ ಪ್ರಕರಣದಲ್ಲಿ ಸೂಕ್ತ ಆದೇಶಕ್ಕಾಗಿ ಇಲಾಖೆಯು ಕಡತ ಮಂಡಿಸಿರುವುದು ಗೊತ್ತಾಗಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular