Sunday, April 20, 2025
Google search engine

Homeರಾಜ್ಯಹಣದುಬ್ಬರ ನಿಯಂತ್ರಿಸಲು ಸರ್ಕಾರದಿಂದ ಪ್ರಯತ್ನ: ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ

ಹಣದುಬ್ಬರ ನಿಯಂತ್ರಿಸಲು ಸರ್ಕಾರದಿಂದ ಪ್ರಯತ್ನ: ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ

ಹೈದರಾಬಾದ್: ಬಡತನದ ವಿರುದ್ಧ ಮೋದಿ ಸರ್ಕಾರ ಪ್ರಬಲವಾಗಿ ಹೋರಾಡುತ್ತಿದೆ. ದೇಶದ ಆರ್ಥಿಕತೆ ವೇಗದ ಗತಿಯಲ್ಲಿ ಸಾಗುತ್ತಿದೆ. ಹಣದುಬ್ಬರ ನಿಯಂತ್ರಿಸಲು ಸರ್ಕಾರದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಇಂದು ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವಕರು, ರೈತರು, ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ನಿರುದ್ಯೋಗ ನಿವಾರಣೆಗೆ, ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ. ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ. ಕೇಂದ್ರ ಬಜೆಟ್‌ನಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.

ನವೀಕರಿಸಬಹುದಾದ ಇಂಧನಗಳಿಗೂ ಅನುದಾನ ನೀಡಲಾಗಿದ್ದು, ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಲ್ಯಾಣ ಅನ್ನ ಯೋಜನೆ ಮುಂದಿನ ಐದು ವರ್ಷದವರೆಗೆ ವಿಸ್ತರಿಸಲಾಗಿದೆ. ೮೦ ಕೋಟಿ ಫಲಾನುಭವಿಗಳು ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಬುಡಕಟ್ಟು ಜನಾಂಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ. ಭಾರತ ಉತ್ಪಾದನೆಯಲ್ಲಿ ವೇಗ ಪಡೆದುಕೊಂಡಿದೆ. ೧೨ ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಿಸಲಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular