ಮಂಡ್ಯ: ರಾಜ್ಯದ ಹಲವು ಕಡೆಗಳಲ್ಲಿ ಪ್ರವಾಹ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ನೆರೆ ಪೀಡಿತ ಪ್ರದೇಶಗಳತ್ತ ಸಚಿವರು ದೌಡಾಯಿಸುತ್ತಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಪ್ರವಾಹ ಹಿನ್ನೆಲೆ ಜಿಲ್ಲೆಯಾದ್ಯಂತ ಕಂದಾಯ ಸಚಿವ ಕೃಷ್ಣಭೈರೇಗೌಡ ನೆರೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನಲ್ಲಿ ಹೇಮಾವತಿ ನದಿ ಪ್ರವಾಹ ಹಿನ್ನೆಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಸಕ ಹೆಚ್.ಟಿ. ಮಂಜು, ಜಿಲ್ಲಾಧಿಕಾರಿ ಡಾ. ಕುಮಾರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ತಾಲ್ಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ.