Sunday, April 20, 2025
Google search engine

Homeರಾಜ್ಯಶಿರೂರು ಗುಡ್ಡ ಕುಸಿತ ಪ್ರಕರಣ: ಶೋಧ ಕಾರ್ಯಾಚರಣೆ ಸ್ಥಗಿತ

ಶಿರೂರು ಗುಡ್ಡ ಕುಸಿತ ಪ್ರಕರಣ: ಶೋಧ ಕಾರ್ಯಾಚರಣೆ ಸ್ಥಗಿತ

ಉತ್ತರ ಕನ್ನಡ: ಜಿಲ್ಲೆಯ ಕಾರವಾರದ ಅಂಕೋಲ ಬಳಿಯ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಗುಡ್ಡ ಕುಸಿತಗೊಂಡು ೧೩ ಜನರು ನಾಪತ್ತೆಯಾಗಿದ್ದರು. ಅವರಲ್ಲಿ ಈವರೆಗೆ ೧೦ ಜನರ ಮೃತದೇಹಗಳು ಪತ್ತೆಯಾಗಿದ್ದವು. ಆದರೇ ಇನ್ನೂ ಮೂವರ ಮೃತದೇಹ ಪತ್ತೆಯಾಗಿರಲಿಲ್ಲ. ಇದರ ನಡುವೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದಿತ್ತು. ಈ ಘಟನೆಯಲ್ಲಿ ೧೩ ಮಂದಿ ನಾಪತ್ತೆಯಾಗಿದ್ದರು. ಇವರಲ್ಲಿ ೧೦ ಮಂದಿಯ ಮೃತದೇಹ ಪತ್ತೆಯಾಗಿತ್ತು. ಆದರೇ ೧೩ ದಿನಗಳ ಇಂದಿನವರೆಗೂ ಮೂವರ ಮೃತದೇಹ ಪತ್ತೆಯಾಗಿಲ್ಲ.

೧೩ನೇ ದಿನವಾದಂತ ಇಂದು ಬೆಳಿಗ್ಗೆಯಿಂದ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಿದರೂ ಮೂವರ ಬಗ್ಗೆ ಸಣ್ಣ ಸುಳಿವೂ ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂಬುದಾಗಿ ಜಿಲ್ಲಾಡಳಿತದಿಂದ ಮಾಹಿತಿ ಹೊರ ಬಿದ್ದಿರೋದಾಗಿ ಹೇಳಲಾಗುತ್ತಿದೆ.

RELATED ARTICLES
- Advertisment -
Google search engine

Most Popular