Monday, April 21, 2025
Google search engine

Homeರಾಜ್ಯನೆರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರುಗಳಿಗೆ ಡಿ.ಕೆ. ಶಿವಕುಮಾರ್ ಮನವಿ

ನೆರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರುಗಳಿಗೆ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಜಲ ಸಂಪನ್ಮೂಲ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಡಿಸಿಎಂ ಮನವಿ ಮಾಡಿದ್ದಾರೆ.

ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular