Saturday, April 19, 2025
Google search engine

Homeರಾಜ್ಯಸುದ್ದಿಜಾಲಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಕೆಇಎ ಅಧಿಸೂಚನೆ: ಕೆಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಬಹುದು. ಇಂದಿನಿಂದ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಜುಲೈನಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆ ಅನುಸಾರ ಜುಲೈ 22ರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿತ್ತು. ಆದರೆ, ತಾಂತ್ರಿಕ ದೋಷಕದಿಂದ ಅರ್ಜಿ ಸಲ್ಲಿಕೆ ಮುಂದೂಡಲಾಗಿತ್ತು. ಇದೀಗ ಪರಿಷ್ಕೃತ ಅರ್ಜಿ ಪ್ರಕಟಿಸಿರುವ ಕೆಇಎ ಇಂದಿನಿಂದ (ಜುಲೈ 29)ರಿಂದ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ಮುಂದಾಗಬಹುದು ಎಂದು ತಿಳಿಸಿದೆ.

ವಿದ್ಯಾರ್ಹತೆ: ಅಧಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಒಟ್ಟು 41 ವಿಷಯದಲ್ಲಿ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿ ಇಲ್ಲ.

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ನಿರ್ವಹಣೆಗೆ ಕೆ ಸೆಟ್​ ಅರ್ಹತೆ ಪಡೆಯುವುದು ಅವಶ್ಯವಾಗಿದ್ದು, ಅಭ್ಯರ್ಥಿಗಳು ಪರೀಕ್ಷೆಗೆ ಆನ್​ಲೈನ್​ ಮೂಲಕ ನೋಂದಣಿ​ ಮಾಡಿಕೊಳ್ಳಬಹುದು. ಯುಜಿಸಿ ನಿಯಮದ ಅಡಿಯಲ್ಲಿ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ ಸುಲಭವಾಗಲಿದೆ. ಇಲ್ಲಿಯವರೆಗೆ ಈ ಪರೀಕ್ಷೆಯನ್ನು ಮೈಸೂರು ವಿಶ್ವವಿದ್ಯಾಲಯದಿಂದ ನಡೆಸಲಾಗುತ್ತಿತ್ತು. ಆದರೆ, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿದೆ.

ಪರೀಕ್ಷೆ: ಈ ಅರ್ಹತಾ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 40 ಅಂಕಗಳನ್ನು ಗಳಿಸುವ ಮೂಲಕ ಅರ್ಹತೆ ಸಂಪಾದಿಸಬಹುದು. ರಾಜ್ಯದ ಪ್ರಮುಖ 11 ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 1000 ರೂ, ಮತ್ತು ಪರಿಶಿಷ್ಟ ಜಾತಿ, ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 700 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಅರ್ಹತಾ ಪರೀಕ್ಷೆಗೆ ಜುಲೈ 29ರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 22 ಆಗಿದೆ. ಈ ಹುದ್ದೆಗೆ ನವೆಂಬರ್​ 24ರಂದು ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಈ ಅರ್ಹತಾ ಪರೀಕ್ಷೆ ಕುರಿತು ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

RELATED ARTICLES
- Advertisment -
Google search engine

Most Popular