Saturday, April 19, 2025
Google search engine

Homeರಾಜ್ಯಸುದ್ದಿಜಾಲಹೆಪಟೈಟಿಸ್ ಬಗ್ಗೆ ಅರಿವು ಅತ್ಯಗತ್ಯ: ಡಾ. ಕುಮಾರ್

ಹೆಪಟೈಟಿಸ್ ಬಗ್ಗೆ ಅರಿವು ಅತ್ಯಗತ್ಯ: ಡಾ. ಕುಮಾರ್

ರಾಮನಗರ: ಹೆಪಟೈಟಿಸ್ ವೈರಾಣುವನ್ನು ಆರಂಭದಲ್ಲೇ ಪತ್ತೆ ಹಚ್ಚಿದರೆ ಅನಾರೋಗ್ಯಕ್ಕೀಡಾಗುವುದನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್ ಹೇಳಿದರು.

ಅವರು ಜು. ೨೯ರ ಸೋಮವಾರ ನಗರದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹೆಪಟೈಟಿಸ್‌ನಲ್ಲಿ ಎ, ಬಿ, ಸಿ, ಡಿ, ಇ ಎಂಬ ೫ ವಿಧಗಳಿವೆ, ಅವು ಮಾನವನ ದೇಹ ಸೇರುತ್ತವೆ. ಅವುಗಳನ್ನು ತಡೆಗಟ್ಟುವುದು ಅತಿ ಮುಖ್ಯವಾಗಿದೆ. ಹೆಪಟೈಟಿಸ್‌ನ ಲಕ್ಷಣಗಳು ಕಾಣಿಸಿಕೊಂಡಾಗ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಸಲಹೆ ಪಡೆಯಬೇಕು, ಇದು ಮಾರಕಕ್ಕೆ ತಿರುಗುವ ಮೊದಲು ಗುಣಪಡಿಸಲು ಸಹಾಯ ಮಾಡುವ ಅನೇಕ ಪರಿಣಾಮಕಾರಿ ಔಷಧಿಗಳು ಲಭ್ಯವಿದೆ ಎಂದರು.

ಈ ಕಾಯಿಲೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಹಾಗೂ ಪ್ರಯೋಗಾಲಯ ಸೇವೆ, ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ, ಹೆಚ್ಚಿನ ಪ್ರಯೋಗಾಲಯ ಸೇವೆ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಹಿರಿಯ ತಜ್ಞ ವೈದ್ಯ ಡಾ. ನಾರಾಯಣ ಸ್ವಾಮಿ, ಡಾ. ರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗಾಯಿತ್ರಿ ದೇವಿ, ಚಾಮುಂಡೇಶ್ವರಿ ಆಸ್ಪತ್ರೆಯ ತಜ್ಞ ವೈದರು ಮತ್ತು ಸಿಬ್ಬಂದಿಗಳು ಮತ್ತು ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular