Saturday, April 19, 2025
Google search engine

Homeಸ್ಥಳೀಯಕಣ್ಣಿನ ದೃಷ್ಟಿ ದೋಷವನ್ನು ನಿರ್ಲಕ್ಷ್ಯ ಮಾಡದೇ ಪರೀಕ್ಷಿಸಿಕೊಳ್ಳಲು ಎಂ.ಕೆ.ಸೋಮಶೇಖರ್ ಮನವಿ

ಕಣ್ಣಿನ ದೃಷ್ಟಿ ದೋಷವನ್ನು ನಿರ್ಲಕ್ಷ್ಯ ಮಾಡದೇ ಪರೀಕ್ಷಿಸಿಕೊಳ್ಳಲು ಎಂ.ಕೆ.ಸೋಮಶೇಖರ್ ಮನವಿ

ಮೈಸೂರು: ಆರೋಗ್ಯ ಭಾರತಿ,ಮೈಸೂರು ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಇಲಾಖೆ ಹಾಗೂ ಮೈಸೂರು ರೇಸ್ ಕ್ಲಬ್ ಕಣ್ಣಿನ ಆಸ್ಪತ್ರೆ, ಮೈಸೂರು, ಒಕ್ಕಲಿಗರ ಸಂಘ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ, ಪ್ರಗತಿ ಕೋ ಆಪರೇಟಿವ್ ಸೊಸೈಟಿ, ಪ್ರಮಥಿ ಪ್ರಿಂಟ್ಸ್, ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್, ಪ್ರಧಾನ ಮಂತ್ರಿ ಜನೌಷಧ ಕೇಂದ್ರ ನಂಜು ಮಳಿಗೆ ಇವರ ಸಹಯೋಗದಲ್ಲಿ ಮೈಸೂರಿನ ವಿದ್ಯಾರಣ್ಯಪುರಂನ ಒಕ್ಕಲಿಗರ ಸಮುದಾಯ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಂ.ಕೆ ಸೋಮಶೇಖರ್ ರವರು ಜ್ಯೋತಿ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಇ.ಚೇತನ್, ನಿರ್ದೇಶಕರಾದ ಕುಮಾರ್, ಶಿಬಿರ ಸಂಘಟಕರಾದ ಮಾಜಿ ಪಾಲಿಕೆ ಸದಸ್ಯರಾದ ಎಂ.ಸುನೀಲ್, ಮ್ಯಾನೇಜರ್ ಲಿಂಗೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್, ಪ್ರಗತಿ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಹಾಗೂ ಪ್ರಮಥ ಪ್ರಿಂಟ್ಸ್ ಮಾಲೀಕರಾದ ಮಂಜುನಾಥ್ , ಕೆ.ಎನ್.ವೆಂಕಟಾಚಲ ಪ್ರಸಾದ್, ಎಂ.ಆರ್.ಸಿ ಸಂಯೋಜಕ ರಾಮು ಉಪಸ್ಥಿತರಿದ್ದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಎಂ.ಕೆ.ಸೋಮಶೇಖರ್ ರವರು ಹುಟ್ಟಿನಿಂದಲೇ ದೃಷ್ಟಿಯನ್ನು ಕಳೆದುಕೊಂಡವರು ಪ್ರಪಂಚವನ್ನು ನೋಡುವ ಭಾಗ್ಯದಿಂದ ವಂಚಿತರಾಗಿರುತ್ತಾರೆ. ಆದರೆ ಬಹಳಷ್ಟು ಮಂದಿ ತಮ್ಮ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ.ಆದ ಕಾರಣ ಧೃಷ್ಟಿ ಇದ್ದವರು ಕಣ್ಣಿನ ರಕ್ಷಣೆ ಗೆ ಒತ್ತು ನೀಡುವುದು ಅವಶ್ಯ. ಕಣ್ಣಿನ ಧೃಷ್ಟಿ ಎಲ್ಲರಿಗೂ ಮಹತ್ವದ್ದು ಅದರಲ್ಲೂ ವಿಶೇಷವಾಗಿ ವಯೋವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ.

ಕಣ್ಣಿನ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡದೇ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬಹುದು.ನಿತ್ಯ ಜೀವನದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಿದ್ದಾರೆ. ಎಲ್ಲರೂ ಸದುಪಯೋಗ ಪಡೆದುಕೊಂಡು ಅವಶ್ಯಕತೆ ಇದ್ದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.ಶಿಬಿರದಲ್ಲಿ ಮುನ್ನೂರಕ್ಕೂ ಹೆಚ್ಚು ಜನ ಕಣ್ಣಿನ ತಪಾಸಣೆ ಮಾಡಿಸಿಕೊಂಡರು.

RELATED ARTICLES
- Advertisment -
Google search engine

Most Popular