ಬೆಂಗಳೂರು: ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ ೭೦ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ ೭೦ಕ್ಕೂ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ ೪೦೦ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎನ್ನಲಾಗಿದೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದ್ದು ಭರದಿಂದ ಕಾರ್ಯಚರಣೆ ನಡೆಯುತ್ತಿದೆ.