ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂದುವರೆದ ಮಳೆಯ ಆರ್ಭಟ ಹಿನ್ನಲೆ ಕೆಆರ್ ಎಸ್ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಆತಂಕ ಮತ್ತೆ ಎದುರಾಗಿದೆ.
ಡ್ಯಾಂನಿಂದ ನದಿಗೆ 1.10ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕಾವೇರಿ ನೀರಾವರಿ ನಿಗಮದಿಂದ ಪ್ರವಾಹ ಎಚ್ಚರಿಕೆ ಬಗ್ಗೆ ತುರ್ತು ಸಂದೇಶ ರವಾನಿಸಲಾಗಿದೆ.
ನದಿ ಪಾತ್ರದ ಜನರು ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಹಾಗೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಡಾ.ಕುಮಾರ ಮನವಿ ಮಾಡಿದ್ದಾರೆ.